ಇದ್ರಿಷ್ ಹತ್ಯೆ ಪ್ರಕರಣ: ಚುನಾವಣಾ ನೀತಿ ಸಂಹಿತೆ ಜಾರಿ; ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಉಡುಪಿ ಚುನಾವಣಾಧಿಕಾರಿ

ಉಡುಪಿ: ಇದ್ರಿಷ್ ಹತ್ಯೆಯನ್ನು ಖಂಡಿಸಿ, ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಉಡುಪಿ ಜಿಲ್ಲಾ ಸಮಿತಿ ಸಲ್ಲಿಸಿದ ಮನವಿಗೆ ಉಡುಪಿಯ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಸೀತಾ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಪಕ್ಷದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪಕ್ಷ ಎ.4ರ ಮಂಗಳವಾರದಂದು ಪತ್ರ ನೀಡಿದ್ದು, ಎ.7 ಅದಕ್ಕೆ ಹಿಂಬರಹ […]