ರಾಜ್ಯದ ಹೆಸರನ್ನು ‘ಕೇರಳಂ’ಗೆ ಬದಲಾಯಿಸುವ ನಿರ್ಣಯಕ್ಕೆ ಅಂಗೀಕಾರ ಹಾಕಿದ ಕೇರಳ ವಿಧಾನಸಭೆ; ಕೇಂದ್ರದ ಅಂಗೀಕಾರಕ್ಕೆ ಮನವಿ
ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳ’ ದಿಂದ ‘ಕೇರಳಂ’ ಎಂದು ಅಧಿಕೃತವಾಗಿ ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ರಾಜ್ಯ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು. ‘ಕೇರಳ ವನ್ನು ಕೇರಳಂ ಎಂದು ಬದಲಾಯಿಸಲು ಕೇರಳ ವಿಧಾನಸಭೆಯು ಸಂವಿಧಾನದಕ್ಕೆ ತಿದ್ದುಪಡಿಯನ್ನು ಮಾಡಲು ಕೋರಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ವಿಧಾನಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 118 ರ ಅಡಿಯಲ್ಲಿ ಸದನದಲ್ಲಿ ನಿರ್ಣಯದ ವಿಷಯಗಳನ್ನು ಮಂಡಿಸಿದರು. ಮಲಯಾಳಂನಲ್ಲಿ ‘ಕೇರಳಂ’ ಎಂಬುದು ಸ್ವೀಕಾರಾರ್ಹ ಮತ್ತು ಸಾಮಾನ್ಯ […]
ಮಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಮಂಗಳೂರು: ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಮಂಗಳೂರಿನ ಮೆಸ್ಕಾಂ ಕಚೇರಿ ಮುಂದೆ ಶುಕ್ರವಾರ ಸಿಪಿಎಂ ವತಿಯಿಂದ ಪ್ರತಿಭಟನೆ ನಡೆಯಿತು. ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ವಿಪರೀತ ವಿದ್ಯುತ್ ದರ ಏರಿಕೆ, ಹೆಚ್ಚುವರಿ ಡಿಪಾಸಿಟ್, ತಪ್ಪುಲೆಕ್ಕಾಚಾರ ಮುಂತಾದ ಮೆಸ್ಕಾಂನ ಅವ್ಯವಸ್ಥೆಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಸಿಪಿಎಂ ಕಾರ್ಯಕರ್ತರು, ಸಾರ್ವಜನಿಕರು, ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಿರಿ, ಹೆಚ್ಚುವರಿ ಡಿಪಾಸಿಟ್ ಬೇಡವೇ ಬೇಡ ಆಗ್ರಹಿಸಿ, ತಪ್ಪುಲೆಕ್ಕಾಚಾರಗಳನ್ನು ಸರಿಪಡಿಸಿರಿ ಇತ್ಯಾದಿ […]