ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ

ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]