ಕಳವು ತಡೆಗಟ್ಟಲು ಗೋ ರಕ್ಷಣಾ ಸಮಿತಿ ರಚಿಸಿ: ಜಿಲ್ಲಾಡಳಿತಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಪ್ರಭು ಬಿ.ಚವ್ಹಾಣ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳವು ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕೂಡಲೇ ಕ್ರಮಕೈಗೊಂಡು, ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗೋ ರಕ್ಷಣಾ ಸಮಿತಿ ರಚಿಸಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಜಿಲ್ಲಾಡಳಿತಕ್ಕೆ ಪತ್ರ ಬರೆಯುವ ಮೂಲಕ ಖಡಕ್ ಎಚ್ಚರಿಕೆ ನೀಡಿದರು. ಕರಾವಳಿ ಭಾಗದಲ್ಲಿ ನಿರಂತರವಾಗಿ ಗೋವುಗಳು ಕಳವು ಆಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಯನ್ನು ಸೂಕ್ಷ್ಮವಾಗಿ […]