ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು: ನ್ಯಾ.ಶರ್ಮಿಳಾ
ಉಡುಪಿ: ಹೆಣ್ಣು ಮಕ್ಕಳ ಬೆಳವಣಿಗೆಗೆ ಸುರಕ್ಷಿತ ವಾತಾವರಣ ನಿರ್ಮಿಸುವುದರ ಮೂಲಕ ಸಮಾಜದಲ್ಲಿನ ಲಿಂಗ ತಾರತಮ್ಯ ಸಮಸ್ಯೆಯನ್ನು ಸರಿಪಡಿಸಲು ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸೋಮವಾರ, ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್ಲೈನ್ 1098 ಉಡುಪಿ ಮತ್ತು ಶ್ರೀಕೃಷ್ಣ ರೋರ‍್ಯಾಕ್ಟ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ […]