ಕ್ರಿಯೇಟಿವ್‌ ‘ಆವಿರ್ಭವ್‌-2023’: ಕಾಲೇಜಿನ ವಾರ್ಷಿಕೋತ್ಸವ ಆಚರಣೆ

ಕಾರ್ಕಳ: ವಸುದೈವ ಕುಟುಂಬಕಂ ಪರಿಕಲ್ಪನೆಯ ಮೂಲಕ ಎಲ್ಲ ಭಾಷೆಗಳನ್ನು ಗೌರವಿಸುವ ಮತ್ತು ಪರಿಚಯಿಸುವ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ- ಆವಿರ್ಭವ್-2023, ನ. 25 ರಂದು ಹಿರ್ಗಾನದ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು. ಮಂಗಳೂರು ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ, ಪ್ರಖರ ವಾಗ್ಮಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಜೀವನದ ಎಲ್ಲ ಹಂತಗಳಲ್ಲಿ ಹೋರಾಟ ನಡೆಯುತ್ತದೆ. ಕಠಿಣ ಪರಿಶ್ರಮ, ನಿರಂತರ ತೊಡಗಿಸಿಕೊಳ್ಳುವಿಕೆ, ಬಂದ ಸವಾಲುಗಳಿಗೆ ಎದೆಯೊಡ್ಡಿ ನಿಂತು ಎದುರಿಸಿದಾಗ ಯಶಸ್ಸು ಹಿಂಬಾಲಿಸಿ ಬರುತ್ತದೆ. ಸಾಧಕರ ಸಾಧನೆಗಳು ಕೇಳಲು […]