ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ
ಕಾರ್ಕಳ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23ರ ಬೆಳಿಗ್ಗೆ 11 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ ಖರೀದಿಯೊಂದಿಗೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. […]
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಿ
ಕಾರ್ಕಳ: ದ್ವಿತೀಯ ಪಿಯುಸಿ ಫಲಿತಾಂಶಗಳು ಪ್ರಕಟವಾಗಿದ್ದು, ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಾರ್ಕಳ: ಕ್ರಿಯೇಟಿವ್ ಪುಸ್ತಕ ಮನೆಯ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ
ಕಾರ್ಕಳ: ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶದಿಂದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್ ಬಿಡಿ, ಪುಸ್ತಕ ಹಿಡಿ” ಅಭಿಯಾನವನ್ನು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಮೂಲಕ ಯಶಸ್ವಿಗೊಳಿಸಲಾಯಿತು. ಸಾಹಿತ್ಯ ಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ ತಾಲೂಕಿನ ಸ್ಥಳೀಯ ಶಾಲೆಗಳನ್ನು ಸಂದರ್ಶಿಸಿ ಪುಸ್ತಕವನ್ನು […]
ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರಚೇತನ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಕಾರ್ಕಳ: ಸ್ವಾಮಿ ವಿವೇಕಾನಂದರ ಚಿಂತನೆಗಳು ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಕ್ರಿಯೇಟಿವ್ ಕಾಲೇಜಿನ ಗಣಿತ ಉಪನ್ಯಾಸಕ ಪ್ರದೀಪ್ ಅಂಚನ್ ಹೇಳಿದರು. ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ‘ಯುವ ಸಪ್ತಾಹ’ದ ಅಂಗವಾಗಿ ನಡೆದ ವಿವೇಕಾನಂದರ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಗತ್ತು […]
ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರ ಉದ್ಘಾಟನೆ
ಕಾರ್ಕಳ: ಸೇವಾ ಮನೋಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಲೋಚನಾ ಸುಂದರ ಶೆಟ್ಟಿ ಕಲಾ ವೇದಿಕೆಯಲ್ಲಿ ನಡೆದ ಕಾಲೇಜಿನ ಮೊದಲ ಎನ್ ಎಸ್ ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಭಾವನೆ ಜೀವನದ ಉತ್ಕರ್ಷಕ್ಕೆ ಭದ್ರ ಬುನಾದಿಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆಚ್ಚಿನ ಉತ್ತೆಜನ ನೀಡಿದಂತಾಗುತ್ತಿದೆ […]