ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನ ಎನ್.ಎಸ್.ಎಸ್‌ ಶಿಬಿರದ ಪೂರ್ವಭಾವಿ ಸಭೆ

ಕಾರ್ಕಳ: ಇಲ್ಲಿನ ಮೂರೂರಿನಲ್ಲಿಅ12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ಎನ್‌.ಎಸ್‌.ಎಸ್‌ ಶಿಬಿರವು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೆ.30 ರಂದು ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ನಡೆಯಿತು. ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಊರಿನ […]

ವಿದ್ಯಾರ್ಥಿಗಳಂತೆ ಶಿಕ್ಷಕರೂ ಸದಾ ಅಧ್ಯಯನಶೀಲರಾಗಿರಬೇಕು: ಪ್ರೊ.ಬಿ.ಪದ್ಮನಾಭ ಗೌಡ

ಕಾರ್ಕಳ: ಶಿಕ್ಷಣ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನ ಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆ ನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ, ಗುರುಗಳೆಂದರೆ ಅಪಾರ ಗೌರವದಿಂದ ಕಾಣಬೇಕಾದ ವ್ಯಕ್ತಿ. […]

ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ- ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳ: ಹಿರ್ಗಾನ ಗ್ರಾಮದಲ್ಲಿರುವ ‘ಬೆಂಗಾಲ್‌’ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ನಡೆದವು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಸಂತೋಷ್‌ ಶೆಟ್ಟಿ, ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ. ಆದರೆ ಹೊಟ್ಟೆ ತುಂಬಿಸಲು ರೈತ ಬೆಳೆದ ಬೆಳೆಯೇ ಬೇಕಾಗುತ್ತದೆ. ಆಹಾರದ ಉತ್ಪಾದನೆ […]

ಕಾರ್ಕಳ: ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ: ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮವಾಗಿ ಇಂದು ನಾವೆಲ್ಲಾ ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನಂತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತ ನ್ಯಾಯವಾದಿ ಎಂ ಕೆ ವಿಜಯಕುಮಾರ್ ಕರೆ ನೀಡಿದರು. ಅವರು ಮಂಗಳವಾರದಂದು ಕಾರ್ಕಳ ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ ಪುಣ್ಯ. ಈ ದೇಶದ ಪ್ರಜೆಗಳಾಗಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳೋಣ […]

ಕಾರ್ಕಳ: ಕಂಪೆನಿ ಸೆಕ್ರಟರಿ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ

ಕಾರ್ಕಳ: ಕಂಪೆನಿ ಸೆಕ್ರೆಟರಿ ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್‌ ಮಂಜುನಾಥ ಭಟ್‌, ಶ್ರೀಯಾ ಕೆ ಎಸ್‌, ಶ್ರಾವ್ಯ ಭಟ್‌ ಎಸ್‌, ಪ್ರಣೀತಾ, ಧನುಷ್‌ ಡಿ, ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಅನುಭವಿ ಉಪನ್ಯಾಸಕರ ತಂಡದೊಂದಿಗೆ ಕಾರ್ಯ ಪ್ರವೃತ್ತವಾಗಿರುವ ಸಂಸ್ಥೆ ತನ್ನ ಮೊದಲ ದಿನಗಳಿಂದಲೂ ವಾಣಿಜ್ಯ ವಿಭಾಗದಲ್ಲಿ ಸಿ.ಎ, ಸಿ.ಎಸ್‌ ಮತ್ತು ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ವಿಶೇಷ ತರಗತಿ ಮತ್ತು ತರಬೇತಿ ನೀಡುತ್ತಾ ಬಂದಿದ್ದು ಅತ್ಯುತ್ತಮ ಫಲಿತಾಂಶವೂ ದಾಖಲಾಗಿರುವುದನ್ನು […]