2023 ಏಷ್ಯನ್ ಗೇಮ್ಸ್‌: ಶ್ರೀಲಂಕಾ ತಂಡವನ್ನು ಮಣಿಸಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡ

ಭಾರತ ಮಹಿಳಾ ಕ್ರಿಕೆಟ್ ತಂಡವು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದು ಫೈನಲ್‌ನಲ್ಲಿ ಶ್ರೀಲಂಕಾವನ್ನು 19 ರನ್‌ಗಳಿಂದ ಸೋಲಿಸಿತು. ಇದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವಾಗಿದೆ. ಹರ್ಮನ್‌ಪ್ರೀತ್ ಕೌರ್ ಭಾರತಕ್ಕೆ ಟಾಸ್ ಗೆದ್ದು ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರು ಸುಗಂದಿಕಾ ಕುಮಾರಿ ಅವರಿಗೆ ವಿಕೆಟ್ ನೀಡಿದರು. ಸ್ಮೃತಿ ಮಂಧಾನ ಮತ್ತು ಜೆಮಿಮಾ ರಾಡ್ರಿಗಸ್ 73 ರನ್‌ಗಳ ನಿರ್ಣಾಯಕ ಜೊತೆಯಾಟವನ್ನು ಮಾಡಿದರು. […]

ಗಂಡು ಮಗುವನ್ನು ಬರಮಾಡಿಕೊಂಡ ಜಸ್ಪ್ರೀತ್ ಬುಮ್ರಾ ದಂಪತಿಗಳು

ಮುಂಬೈ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ನಮ್ಮ ಪುಟ್ಟ ಕುಟುಂಬ ಬೆಳೆದಿದೆ ಮತ್ತು ನಮ್ಮ ಹೃದಯಗಳು ನಾವು ಊಹಿಸಿಕೊಳ್ಳಲಾರದಷ್ಟು ತುಂಬಿ ಬಂದಿವೆ! ಇಂದು ಬೆಳಿಗ್ಗೆ ನಾವು ನಮ್ಮ ಪುಟ್ಟ ಹುಡುಗ ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಜಗತ್ತಿಗೆ ಸ್ವಾಗತಿಸಿದೆವು. ನಾವು ಚಂದ್ರನ ಮೇಲಿದ್ದೇವೆ ಮತ್ತು ನಮ್ಮ ಜೀವನದ ಈ ಹೊಸ ಅಧ್ಯಾಯವು ಅದರೊಂದಿಗೆ ತರುವ ಎಲ್ಲದಕ್ಕೂ ಕಾತುರರಾಗಿದ್ದೇವೆ – ಜಸ್ಪ್ರಿತ್ ಮತ್ತು ಸಂಜನಾ, […]

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ

ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ಮತ್ತು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿಯವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರದಾದ ವರದರಾಜ ಭಟ್,ವಾದಿರಾಜ ಪೆಜತ್ತಾಯ,ವ್ರಜನಾಥ ಆಚಾರ್ಯ,ಲಾತವ್ಯ ಆಚಾರ್ಯ ,ಅಶ್ವಿನ್ ಮೊದಲಾದವರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮಂಗಳವಾರದಂದು ಅವರು ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳ ಕರ್ವಾಲಿನ ಯರ್ಲಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೂ ಭೇತಿ ನೀಡಿ ಪೂಜೆ ಸಲ್ಲಿಸಿದ್ದರು.

ಮತ್ತೊಮ್ಮೆ ಶತಕ ಪೇರಿಸಿದ ಶುಭಮನ್ ಗಿಲ್: ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ಗಿಲ್ ಕಮಾಲ್

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಶತಕ ಸಿಡಿಸಿದ್ದಾರೆ. ಇತ್ತೀಚೆಗಷ್ಟೇ ದ್ವಿಶತಕ ಬಾರಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದ ಗಿಲ್ ಮತ್ತೊಂದು ಶತಕ ಬಾರಿಸುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ. ಶುಭಮನ್ ಗಿಲ್ 72 ಎಸೆತಗಳಲ್ಲಿ 100 ರನ್ ಪೂರೈಸಿದರು. ಮೂರನೇ ಏಕದಿನ ಪಂದ್ಯದಲ್ಲಿ ಅವರ ಒಟ್ಟು ಸ್ಕೋರ್ 78 ಎಸೆತಗಳಲ್ಲಿ 112 ರನ್ ಆಗಿತ್ತು. ಈ ವೇಳೆ ಅವರು 5 ಸಿಕ್ಸರ್ ಮತ್ತು 13 ಬೌಂಡರಿಗಳನ್ನು […]

ಹಸೆಮಣೆ ಏರಲಿದೆ ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿ: ಖಂಡಾಲಾದಲ್ಲಿ ವಿವಾಹ ಸಾಧ್ಯತೆ

ಬಹುಚರ್ಚಿತ ಜೋಡಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಮತ್ತು ನಟ ಸುನಿಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಕಡೆಗೂ ಹಸೆಮಣೆ ಏರಲು ತಯಾರಾಗಿದ್ದಾರೆ. ಜನವರಿ 21 ರಂದು ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ಅವರ ವಿವಾಹ ಮಹೋತ್ಸವಗಳು ಪ್ರಾರಂಭವಾಗಲಿದ್ದು, ಜನವರಿ 23 ರಂದು ಈ ಜೋಡಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ. ಅಥಿಯಾ ತಂದೆ ಚಿತ್ರನಟ ಸುನೀಲ್ ಶೆಟ್ಟಿ ಅವರು 17 ವರ್ಷಗಳ ಹಿಂದೆ ಮಹಾರಾಷ್ಟ್ರದ ಖಂಡಾಲಾದಲ್ಲಿ ನಿರ್ಮಿಸಿರುವ […]