ಉಡುಪಿ: ಬಸ್ ಚಾಲಕರಿಗೆ ಚೂರಿಯಿಂದ ಇರಿತ

ಉಡುಪಿ: ಬಸ್‌ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ಒಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಬಳಿಕ ನಗರ ಠಾಣೆಯಲ್ಲಿ […]

ಕಡಬ: ಬೆಡ್ ಶೀಟ್ ಮಾರಾಟಗಾರರಿಂದ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನ

ಕಡಬ: ಬೆಡ್ ಶೀಟ್ ಮಾರಾಟಗಾರರ ಸೋಗಿನಲ್ಲಿ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಮನೆಯಲ್ಲಿದ್ದ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ವರದಿಯಾಗಿದೆ. ರಫೀಕ್ ಹಾಗೂ ರಮೀಝುದ್ದೀನ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಬೆಡ್ ಶೀಟ್ ಮಾರಾಟ ಮಾಡಲು ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿಗೆ ಬಂದಿದ್ದು, ಆ ಸಂದರ್ಭ ಆರೋಪಿಗಳು ಮಹಿಳೆಯ ಮೈಮೇಲೆ ಕೈ ಹಾಕಿ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸಂದಿಗ್ದ ಸನ್ನಿವೇಶದಲ್ಲಿ ಅಪಾಯವನ್ನರಿತು ಮಹಿಳೆಯು ಬೊಬ್ಬೆ ಹಾಕಿದ್ದು, ಇದರಿಂದ ಹೆದರಿದ ಆರೋಪಿಗಳು ಸ್ಥಳದಿಂದ […]