ಮಂಗಳೂರು: ಬ್ರಹ್ಮರಕೋಟ್ಲು ಭೀಕರ ರಸ್ತೆ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು
ಮಂಗಳೂರು: ಟವೇರಾ ಕಾರು ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಬಿಸಿರೋಡ್- ಮಂಗಳೂರು ರಸ್ತೆಯ ಬ್ರಹ್ಮರಕೋಟ್ಲು ಟೋಲ್ಗೇಟ್ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೆ ಮೂವರು ಗಂಭೀರ ಗಾಯಗೊಂಡಿದ್ದಾರೆ.ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೋಟ್ಲು ಬಳಿ ಟವೇರಾದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಭಟ್ಕಳ ಮೂಲದ ಕುಟುಂಬ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.