ಎಡಪಂಥೀಯ ಉಗ್ರವಾದದ ಪ್ರಮಾಣದಲ್ಲಿ ಗಣನೀಯ ಇಳಿಕೆ: ಉಗ್ರವಾದದ ವಿರುದ್ದ ಶೂನ್ಯ ನೀತಿಗೆ ದೊರೆತ ಫಲ
ನವದೆಹಲಿ: ಮೂರು ದಶಕಗಳಿಂದ ಮಾವೋವಾದಿಗಳ ಭದ್ರಕೋಟೆಯಾಗಿದ್ದ ಜಾರ್ಖಂಡ್‌ನ ಬುಧಾ ಪಹಾಡ್ ಅನ್ನು ಇದೀಗ ಯಶಸ್ವಿಯಾಗಿ ತೆರವುಗೊಳಿಸಲಾಗಿದೆ ಮತ್ತು ಭದ್ರತಾ ಪಡೆಗಳ ಶಾಶ್ವತ ನೆಲೆಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮಹಾನಿರ್ದೇಶಕ ಕುಲದೀಪ್ ಸಿಂಗ್ ಹೇಳಿದ್ದಾರೆ. ಎಡಪಂಥೀಯ ಉಗ್ರವಾದದ ವಿರುದ್ಧ (ಎಲ್‌ಡಬ್ಲ್ಯುಇ) ಭದ್ರತಾ ಪಡೆಗಳು ಸಾಧಿಸಿದ ಯಶಸ್ಸಿನ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಭದ್ರತಾ ಪಡೆಗಳ ಶಿಬಿರಗಳನ್ನು ಸ್ಥಾಪಿಸಲು ಮತ್ತು ಪ್ರದೇಶವನ್ನು ನಿಯಂತ್ರಣಕ್ಕೆ ತರಲು ಈ ವರ್ಷದ ಏಪ್ರಿಲ್‌ನಿಂದ ಬುಧಾ ಪಹಾಡ್‌ನಲ್ಲಿ […]
ಜಮ್ಮು ಮತ್ತು ಕಾಶ್ಮೀರ: ಕುಪ್ವಾರ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಸೇರಿದಂತೆ 2 ಎಲ್‌ಇಟಿ ಭಯೋತ್ಪಾದಕರನ್ನು ಮಟ್ಟ ಹಾಕಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟಹಾಕಿದೆ. ಇಬ್ಬರೂ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಇ ತೈಬಾ (ಎಲ್‌ಇಟಿ) ಗೆ ಸೇರಿದವರು ಮತ್ತು ಇಬ್ಬರಲ್ಲಿ ಒಬ್ಬ ತುಫೈಲ್, ಪಾಕಿಸ್ತಾನದವನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಇನ್ನಷ್ಟು ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಕುಪ್ವಾರದ ಚಕ್ರಸ್ ಕಂಡಿ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಸೋಮವಾರ ಮುಂಜಾನೆ, ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ […]