ಕರಾವಳಿ ಭದ್ರತಾ ತರಬೇತಿ ಸಮಾರೋಪ
ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 4ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಶನಿವಾರ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿ ಅವಧಿಯಲ್ಲಿ ಪಡೆದ ಮಾಹಿತಿಗಳನ್ನು ತಮ್ಮ ದಿನನಿತ್ಯದ ಕರ್ತವ್ಯದಲ್ಲಿ ಅಳವಡಿಸಿಕೊಂಡಾಗ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ […]