ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಗ್ರಾಮದಲ್ಲಿ ಬಂದೂಕು ತೋರಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಮತ್ತು ಬುಡಕಟ್ಟು ಜನಾಂಗದವರ ಭೂಮಿಯನ್ನು ಗ್ರಾಮಸ್ಥರಿಂದ ಬಲವಂತವಾಗಿ ಕಸಿದುಕೊಳ್ಳಲಾಗುತ್ತಿರುವ್ ಆರೋಪದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. ಪ.ಬಂಗಾಳದ ಸಂದೇಶಖಾಲಿಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರ ಮೇಲೆ ಬಂದೂಕು ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸುದ್ದಿ ವರದಿಗಳನ್ನು ಪರಿಶೀಲಿಸಿದ ನಂತರ “ತೀವ್ರವಾಗಿ ನಿರಾಶೆಗೊಂಡಿರುವುದಾಗಿ” ನ್ಯಾಯಮೂರ್ತಿ ಅಪೂರ್ವ ಸಿನ್ಹಾ ರೇ ಹೇಳಿದ್ದಾರೆ. […]