ಇಂದು ಸಂಜೆ ಪುರಭವನದಲ್ಲಿ ‘ಜಾನಪದ ಉತ್ಸವ 2022’ ಕಾರ್ಯಕ್ರಮ
ಉಡುಪಿ: ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಘಟಕ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡಿನ ಜಾನಪದ ಕಲೆ ಮತ್ತು ಸಂಸ್ಕೃತಿಗಳನ್ನು ಅನಾವರಣಗೊಳಿಸುವ ‘ಜಾನಪದ ಉತ್ಸವ 2022’ ಕಾರ್ಯಕ್ರಮ ಶನಿವಾರ, ಜೂನ್ 18 ರಂದು ಸಂಜೆ 3:30 ರಿಂದ 1 ಗಂಟೆವರೆಗೆ ಅಜ್ಜರಕಾಡಿನ ಪುರಭವನದಲ್ಲಿ ಜರುಗಲಿದೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್ ವತಿಯಿಂದ ಜಾನಪದ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಘಟಕಗಳ ಪದಗ್ರಹಣ ಮತ್ತು ಶ್ರೀಮತಿ […]