ಭಾರತ XI ಮತ್ತು ವಿಶ್ವ XI ತಂಡದ ನಡುವೆ ಕ್ರಿಕೆಟ್ ಪಂದ್ಯವಾಡಿಸಲು ಸರಕಾರದಿಂದ ಬಿಸಿಸಿಐಗೆ ಮನವಿ

ನವದೆಹಲಿ: ಪಿಟಿಐ ವರದಿಗಳನ್ನು ನಂಬುವುದಾದರೆ, ಭಾರತದ 75 ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆ ಅಂಗವಾಗಿ ಆಗಸ್ಟ್ 22 ರಂದು ಭಾರತ XI ಮತ್ತು ವಿಶ್ವ XI ತಂಡದ ನಡುವೆ ಕ್ರಿಕೆಟ್ ಪಂದ್ಯವನ್ನು ಆಯೋಜಿಸುವಂತೆ ಭಾರತ ಸರ್ಕಾರವು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಕೋರಿಕೆ ಸಲ್ಲಿಸಿದೆ. ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನದ ಭಾಗವಾಗಿ ಭಾರತದ ಸಂಸ್ಕೃತಿ ಸಚಿವಾಲಯವು ಭಾರತದ ಅಗ್ರ ಆಟಗಾರರು ಮತ್ತು ವಿದೇಶದ ಜನಪ್ರಿಯ ಕ್ರಿಕೆಟಿಗರ ಮಧ್ಯೆ ಪಂದ್ಯವನ್ನು ಆಡಿಸಲು ಪ್ರಯತ್ನಿಸುವಂತೆ ಬಿಸಿಸಿಐ ಅಧಿಕಾರಿಗಳ […]

ಮೇ 28 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವು ಮೇ 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ […]

ಮೇ 30 ರಿಂದ ಜೂನ್ 1 ರವರೆಗೆ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಮೇ 30 ರಿಂದ ಜೂನ್ 1 ರ ವರೆಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾಕೂಟವನ್ನು ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮೇ 30 ರಂದು ಸಂಜೆ 4.30 ಕ್ಕೆ ಉದ್ಘಾಟಿಸಲಿರುವರು. ಜಿಲ್ಲೆಯಿಂದ ಆಯ್ಕೆಯಾಗಿ ಆನ್‌ಲೈನ್ ಮೂಲಕ ನೊಂದಾಯಿಸಿರುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಸೂಟ್ ಮತ್ತು […]

ಭಾರತ@75: ಕರ್ನಾಟಕ ಸಂಸ್ಕೃತಿ ಇಲಾಖೆಯಿಂದ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರದ ‘ಹರ್ ಘರ್ ಝಂಡಾ’ ಕರೆಯನ್ನು ರಾಜ್ಯದಲ್ಲೂ ವಿಸ್ತರಿಸುವ ಪ್ರಕ್ರಿಯೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಗಸ್ಟ್ 9 ರಿಂದ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಒತ್ತಾಯಿಸಿದೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ತನ್ನ ‘ಅಮೃತ ಭಾರತಿಗೆ ಕನ್ನಡದ ಆರತಿ’ ಅಭಿಯಾನದ ಭಾಗವಾಗಿ ‘ಮನೆ ಮನೆಯಲ್ಲಿ ರಾಷ್ಟ್ರಧ್ವಜ’ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ನಾಗರಿಕರು […]