ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ: ನಗರಸಭೆ ಪೌರಾಯುಕ್ತರ ಪ್ರಕಟಣೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಕಟೌಟ್ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಅನುಮತಿ ಪಡೆಯದೇ ಅಳವಡಿಸಿದ್ದಲ್ಲಿ, ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.