ವಾಹನಗಳ ಹಿಂಬದಿ ಸೀಟಿನಲ್ಲಿರುವ ಸವಾರರು ಸೀಟ್ ಬೆಲ್ಟ್ ಧರಿಸದಿದ್ದಲ್ಲಿ ದಂಡ: ಗಡ್ಕರಿ

ನವದೆಹಲಿ: ಕಾರು ಮತ್ತು ಎಸ್‌ಯುವಿಗಳ ಹಿಂಬದಿ ಸೀಟಿನಲ್ಲಿರುವ ಸವಾರರು ಸೀಟ್ ಬೆಲ್ಟ್ ಧರಿಸದಿದ್ದಲ್ಲಿ ಅವರಿಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಈ ಸಂಬಂಧ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ಜನರಲ್ಲಿ ಸೀಟ್ ಬೆಲ್ಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಕ್ರಿಕೆಟಿಗರು ಮತ್ತು ಬಾಲಿವುಡ್ ನಟರನ್ನು ಬಳಸಲಾಗುವುದು ಎಂದು ಅವರು ದೆಹಲಿಯ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಭಾನುವಾರ ಕಾರು ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಚಿವರಿಂದ […]