ಇಂದಿನಿಂದ 5 ದಿನ ಉಡುಪಿ, ದ.ಕ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಉಡುಪಿ, ದಕಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ನಾನಾ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ, ಬೀದರ್, ಧಾರವಾಡ, ಗದಗ, ವಿಜಯಪುರ, ಕೊಪ್ಪಳ ಜಿಲ್ಲೆಗಳ್ಲಿ ಮಳೆಯಾಗಲಿದೆ. ಮಾರ್ಚ್ […]