ನಾಳೆ ಮುಖ್ಯಮಂತ್ರಿ ಪದಗ್ರಹಣ: ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ

ನವದೆಹಲಿ: ಮೇ 20 ರಂದು ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಹೇಮಂತ್ […]

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ: ದೆಹಲಿಗೆ ತೆರಳಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿಯಾಗಬೇಕೆಂಬ ಹಂಬಲದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆ ಕುರಿತು ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಒಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ನನ್ನನ್ನು ಏಕಾಂಗಿಯಾಗಿ ದೆಹಲಿಗೆ ಕರೆದಿದ್ದಾರೆ. ನಾನು ಏಕಾಂಗಿಯಾಗಿ ಹೋಗುತ್ತಿದ್ದೇನೆ” ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಾಗಲೆ ತಮ್ಮ ನಿಷ್ಠಾವಂತ ಶಾಸಕರೊಂದಿಗೆ […]

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಖರ್ಗೆ ಹೆಗಲಿಗೆ: ಯಾರಿಗೆ ಒಲಿಯುವುದು ಮುಖ್ಯಮಂತ್ರಿ ಪಟ್ಟ?

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ತರುವಾಯ, ಹೊಸದಾಗಿ ಆಯ್ಕೆಯಾದ 135 ಕಾಂಗ್ರೆಸ್ ಶಾಸಕರು ಭಾನುವಾರ ಸಂಜೆ ಬೆಂಗಳೂರಿನಲ್ಲಿ ಸಭೆ ಸೇರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಅಂಗೀಕರಿಸಿದರು. ಸಿಎಲ್‌ಪಿ ನಾಯಕ ಮತ್ತು ಆ ಮೂಲಕ ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಶಾಸಕರು ಸಭೆ ನಡೆಸುತ್ತಿದ್ದ ಹೋಟೆಲ್‌ನ ಹೊರಗೆ ಜಮಾಯಿಸಿದ ರಾಜ್ಯ ಪಕ್ಷದ ಅಧ್ಯಕ್ಷ ಡಿ ಕೆ […]

ಕಾಂಗ್ರೆಸ್ ನಾಯಕ ಡಿಕೆಶಿ ಹೆಲಿಕಾಪ್ಟರ್ ಭೂಸ್ಪರ್ಶ ಸಂದರ್ಭ ಹೆಲಿಪ್ಯಾಡ್ ನಲ್ಲಿ ಆಕಸ್ಮಿಕ ಬೆಂಕಿ

ಕಾರವಾರ: ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್‌ಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗಮಿಸುತಿದ್ದಂತೆ ಹೆಲಿಕಾಪ್ಟರ್‌ಗೆ ಸಿಗ್ನಲ್ ನೀಡುವ ಸ್ಮೋಕ್ ಕ್ಯಾಂಡಲ್‌ನಿಂದ ಹೆಲಿಪ್ಯಾಡ್ ನಲ್ಲಿದ್ದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗುರುವಾರ ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಅಭ್ಯರ್ಥಿಗಳ ಪರ ಮತ ಪ್ರಚಾರ ಸಭೆ ಆಯೋಜಿಸಲಾಗಿದ್ದು ಈ ಸಭೆಗೆ ಡಿಕೆಶಿ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ಸಂದರ್ಭ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ […]

ಉಡುಪಿ: ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರದಂದು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಹಮ್ಮಿಕೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಸಿಟಿ ಬಸ್ ಸ್ಟಾಂಡ್ ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಬೃಹತ್ ಪಾದಯಾತ್ರೆಯಲ್ಲಿ ಭಾಗಿಯಾದರು. ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮಲ್ಪೆ ಬಂದರಿನಲ್ಲಿ 75 ಮೀನುಗಾರರು ಕಾಲುಜಾರಿ ಸಾವನ್ನಪ್ಪಿದ್ದಾರೆ. ಬಿಜೆಪಿಗರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. […]