ರಾಜ್ಯದಲ್ಲಿ ಇದುವರೆಗೆ ಶೇ.52.03ರಷ್ಟು ಮತದಾನ: ಅವಿಭಜಿತ ದ.ಕ ಜಿಲ್ಲೆಯಲ್ಲಿ ಮತದಾರರ ಸರತಿ ಸಾಲು!
ಬೆಂಗಳೂರು: 224 ಸ್ಥಾನಗಳ ಕರ್ನಾಟಕ ವಿಧಾನಸಭೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.52.03ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದುವರೆಗಿನ ಅಂಕಿ ಅಂಶಗಳ ಪ್ರಕಾರ ರಾಮನಗರದಲ್ಲಿ ಅತಿ ಹೆಚ್ಚು ಅಂದರೆ ಶೇ.63.3ರಷ್ಟು ಮತದಾನವಾಗಿದೆ. ಏತನ್ಮಧ್ಯೆ, ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತದಾನವಾಗಿದೆ. ಬೆಳಗ್ಗೆಯಿಂದಲೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ಉತ್ಸಾಹಿ ಮತದಾರರು ಉದ್ದನೆಯ ಸರತಿ ಸಾಲಿನಲ್ಲಿ […]
ದ್ವಿತೀಯ ಪಿಯುಸಿ ಫಲಿತಾಂಶ: ಶೇ. 95.33 ಫಲಿತಾಂಶದೊಂದಿಗೆ ದ.ಕ ಪ್ರಥಮ; ಉಡುಪಿ ದ್ವಿತೀಯ: ಈ ಬಾರಿಯೂ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು!
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು 10 ಗಂಟೆಗೆ ಪ್ರಕಟಿಸಿದೆ ಮತ್ತು ಫಲಿತಾಂಶ ಲಿಂಕ್ ಬೆಳಿಗ್ಗೆ 11 ಗಂಟೆಗೆ ಸಕ್ರಿಯವಾಗುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ. ವೆಬ್ ಸೈಟ್ ಲಿಂಕ್: karresults.nic.in ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಶೇಕಡಾ 80.25 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 69.05 ರಷ್ಟು ವಿದ್ಯಾರ್ಥಿಗಳು […]
ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: 52 ಹೊಸ ಮುಖಗಳು, 8 ಮಹಿಳೆಯರಿಗೆ ಮಣೆ
ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಟ್ಟಿಯನ್ನು ಘೋಷಿಸಿದರು. ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ತನ್ನ ಸಾಂಪ್ರದಾಯಿಕ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದರೆ, […]
ಬೆಂಗಳೂರು-ದ.ಕ ಜಿಲ್ಲೆಗಳಲ್ಲಿ ಸಿಎನ್‌ಜಿ/ಪಿಎನ್‌ಜಿ ಬೆಲೆ ಪ್ರತಿ ಎಸ್.ಸಿಎಂಗೆ 7 ರೂ ಕಡಿತ: ಗೈಲ್ ನಿಂದ ಘೋಷಣೆ
ಬೆಂಗಳೂರು: ಸರ್ಕಾರವು ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಬದಲಾಯಿಸಿದ ಕೆಲವೇ ದಿನಗಳಲ್ಲಿ, GAIL (ಗೈಲ್) ಗ್ಯಾಸ್ ಲಿಮಿಟೆಡ್ ಭಾನುವಾರ ಸಿ.ಎನ್.ಜಿ ಮತ್ತು ಪಿ.ಎನ್.ಜಿ ಬೆಲೆಗಳಲ್ಲಿ ಪ್ರತಿ ಯೂನಿಟ್‌ಗೆ ರೂ 7 ವರೆಗೆ ಕಡಿತವನ್ನು ಘೋಷಿಸಿದೆ. ಸಾರಿಗೆಗಾಗಿ ಬಳಸುವ ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ) ಕರ್ನಾಟಕದಲ್ಲಿ ಪ್ರತಿ ಕೆಜಿಗೆ 7 ರೂಪಾಯಿಗಳಷ್ಟು ಅಗ್ಗವಾಗಿದೆ ಎಂದು ಗೈಲ್ (ಇಂಡಿಯಾ) ಲಿಮಿಟೆಡ್‌ನ ಸಿಟಿ ಗ್ಯಾಸ್ ಆರ್ಮ್ ಗೈಲ್ ಗ್ಯಾಸ್ ಲಿಮಿಟೆಡ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ […]
ದ.ಕ ಜಿಲ್ಲೆ: ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಣೆ
ಮಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶ 2023 ಅನ್ನು ಇಂದು ಮಾರ್ಚ್ 31, 2023 ರಂದು ಬಿಡುಗಡೆ ಮಾಡಿದೆ. ಪೂರ್ವ ವಿಶ್ವವಿದ್ಯಾಲಯ ಪರೀಕ್ಷೆ (ಪಿಯುಸಿ) 1 ನೇ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು result.dkpucpa.com ಅಧಿಕೃತ ವೆಬ್‌ಸೈಟ್ ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶವು ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜುಗಳಿಗೆ ಮಾತ್ರ ಎಂಬುದನ್ನು ವಿದ್ಯಾರ್ಥಿಗಳು ಗಮನಿಸಬೇಕು.