ಅಕ್ಟೋಬರ್ 13 ರಿಂದ16 ರವರೆಗೆ ದಕ್ಷಿಣ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ: ಲಾಂಛನ ಬಿಡುಗಡೆ

ಮಂಡ್ಯ: ಇಲ್ಲಿನ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರದಂದು ಬಿಡುಗಡೆಗೊಳಿಸಿದರು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲಾಂಛನ ಸಿದ್ದಪಡಿಸಲಾಗಿದೆ. ಮಹಾಕುಂಭಮೇಳದ ಸಿದ್ದತೆ ಕುರಿತು ಬೊಮ್ಮಾಯಿಯವರು ಮಾಹಿತಿ ಪಡೆದುಕೊಂಡಿದ್ದಾರೆ. ಇದು ರಾಜ್ಯದ ಮಹತ್ವದ […]