ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ
ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದನ್ನು ಖಂಡಿಸಿ ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಯಿತು. ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25 ನೇ ತಾರೀಖಿನಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ […]