ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಂಭ್ರಮದ ದಾಂಡಿಯಾ ಮಹೋತ್ಸವ
ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 5ನೇ ವರ್ಷದ ದಾಂಡಿಯಾ ಮಹೋತ್ಸವ ಇಲ್ಲಿನ ಶೆರ್ವಾಣಿ ಮಂಟಪದ ಸಭಾಂಗಣದಲ್ಲಿ ಶನಿವಾರದಂದು ನಡೆಯಿತು. ಕನ್ನಡದ ಪ್ರಖ್ಯಾತ ಚಿತ್ರನಟ ರಮೇಶ ಅರವಿಂದ್ ಅವರು ದಾಂಡಿಯಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತಾ ನಾಯಕ್, ಕಡಿಯಾಳಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ.ರವಿರಾಜ್ ವಿ.ಆಚಾರ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]