ಇಷ್ಟು ದಿನ ಕಣ್ಮರೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಪ್ರತ್ಯಕ್ಷ: ದರ್ಶನ್ ಬಗ್ಗೆ ಅವರು ಹೇಳಿದ ಸ್ಪೋಟಕ ಸತ್ಯವೇನು?

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದಾರೆಯೆಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ದರ್ಶನ್ ಜೈಲು ಸೇರಿದ ಸಮಯದಲ್ಲಿ ಮಲ್ಲಿಕಾರ್ಜುನ್ ಕಾಣೆಯಾದದ್ದಕ್ಕೂ ಸಂಬಂಧ ಇದೆಯೇ ಎಂಬ ಸಂಶಯ ವ್ಯಕ್ತವಾಗಿತ್ತು. ಆದರೆ ಇದೀಗ ಅವರು ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ತಾವು ಎಲ್ಲರಿಂದ ದೂರ ಉಳಿದಿದ್ದಕ್ಕೆ ಮುಖ್ಯ ಕಾರಣ ಹಣಕಾಸಿನ ನಷ್ಟ ಮತ್ತು ಅನಾರೋಗ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ವಿಷಯ ದರ್ಶನ್ ಅವರಿಗೂ ತಿಳಿದಿಲ್ಲ ಎಂಬುದನ್ನೂ ಹೇಳಿದ್ದಾರೆ. […]