ದಸರಾ ಜಂಬೂ ಸವಾರಿ ಮೆರವಣಿಗೆ: ಹೆಗ್ಗುಂಜೆ ಜಾನಪದ ಕಲಾ ಸಂಘಕ್ಕೆ ಪ್ರಥಮ ಸ್ಥಾನ
ಉಡುಪಿ: ದಸರಾ ಮಹೋತ್ಸವ 2023 ರ ಅಂಗವಾಗಿ ಅಕ್ಟೋಬರ್ 24 ರಂದು ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಜಿಲ್ಲೆಯ ಸಿ. ಚಂದ್ರನಾಯ್ಕ್ ನೇತೃತ್ವದ ಹೆಗ್ಗುಂಜೆ ಶ್ರೀ ಮಲ್ಲಿಕಾರ್ಜುನ ಕುಡುಬಿ ಹೋಳಿ ಜಾನಪದ ಕಲಾಸಂಘವು ಗುಮಟೆ ನೃತ್ಯ ಪ್ರದರ್ಶಿಸಿ, ಪ್ರಥಮ ಸ್ಥಾನ ಪಡೆದು 15,000 ರೂ. ನಗದು ಬಹುಮಾನ ಪಡೆದಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಪ್ರಪ್ರಥಮ ಬಾರಿಗೆ ಮಂಗಳಮುಖಿಯರಿಂದ ದಸರಾ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ
ಮಂಗಳೂರು: ಇದೇ ಮೊದಲ ಬಾರಿಗೆ ಮೂವರು ಮಂಗಳಮುಖಿಯರಿಗೆ ದಸರಾ ಉತ್ಸವದಲ್ಲಿ ನೃತ್ಯಪ್ರದರ್ಶನ ನೀಡುವ ಅವಕಾಶ ದೊರೆತಿದೆ. ಬೋಳಾರದ ಹಳೇಕೋಟೆ ಶ್ರೀ ಮಾರಿಯಮ್ಮ ಗುಡಿಯಲ್ಲಿ ಸೋಮವಾರದಂದು ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ದೇವಾ ಶ್ರೀ ಗಣೇಶಾ’ ಎಂಬ ಹಾಡಿಗೆ ನೃತ್ಯ ಮಾಡುವ ಅವಕಾಶ ನೀಡಲಾಗಿದೆ. ಪ್ರಿಯಾ ಶ್ಯಾಮ್, ಸಂಧ್ಯಾ ಮತ್ತು ರೇಖಾ ಎನ್ನುವ ಮೂವರು ಮಂಗಳಮುಖಿಯರು ಬಾಲಿವುಡ್ ಶೈಲಿಯ ನೃತ್ಯವನ್ನು ಸುಸಾನ್ ಮಿಸ್ಕಿತ್ ಅವರ ಬಳಿ ಕಲಿಯುತ್ತಿದ್ದಾರೆ. ಇಷ್ಟು ದೊಡ್ಡ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಅವಕಾಶ ದೊರೆತಿರುವುದಕ್ಕಾಗಿ […]
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ
ಮೈಸೂರು: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಉದ್ಘಾಟನೆಗಾಗಿ ನಗರಕ್ಕಾಗಮಿಸಿದ್ದು, ಇವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದರದಿಂದ ಬರಮಾಡಿಕೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ತಾಯಿಯ ಎದುರು ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಿದರು. President Droupadi Murmu inaugurates #MysuruDasara Festival at Chamundi Hills, Karnataka.@MinOfCultureGoI @kishanreddybjp @MIB_India @PIB_India @CBC_MIB @PIBBengaluru […]