ದಾವೋಸ್: ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿದ ಬೊಮ್ಮಾಯಿ
ದಾವೋಸ್: ದಾವೋಸ್ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಅನ್ನು ರಾಜ್ಯದ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಉದ್ಘಾಟಿಸಿದರು. ವಿಶ್ವ ಆರ್ಥಿಕ ವೇದಿಕೆ 2022ನಲ್ಲಿ ಭಾಗವಹಿಸಲು ದಾವೋಸ್ ಗೆ ತೆರಳಿರುವ ಬೊಮ್ಮಾಯಿ, ಕರ್ನಾಟಕವು ವಿವಿಧ ಕ್ಷೇತ್ರಗಳಿಗೆ ಬಲವಾದ ಪರಿಸರ ವ್ಯವಸ್ಥೆಯನ್ನು ಹೊಂದಿದೆ ಮತ್ತು ಇಲ್ಲಿನ ಭಾಗವಹಿಸುವಿಕೆಯು ರಾಜ್ಯದ ಪ್ರಮುಖ ಶಕ್ತಿಯನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.