Tag: dc
-
ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ಮೆದುಳು ಜ್ವರ ಬಾರದಂತೆ ತಡೆಯಲು ಜೆ.ಇ. ಲಸಿಕೆ ಪಡೆಯುವುದು ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆಯನ್ನು ಪಡೆಯಲು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ, ಮೆದುಳು ಜ್ವರ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ…
-
ಪಿಟಿಸಿಎಲ್ ವ್ಯಾಪ್ತಿಗೆ ಒಳಪಡುವ ಜಮೀನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ: ಶಾಸಕ ರಘುಪತಿ ಭಟ್ ಗೆ ಅಭಿನಂದನೆ
ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನ. 05 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರದ ಕುರಿತು ಶಾಸಕ ರಘುಪತಿ ಭಟ್ ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು…
-
ಸರ್ಕಾರಿ ಕಚೇರಿಯ ಹೊರಗುತ್ತಿಗೆ ನೌಕರರ ಕುಂದುಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರು ಸೇರಿದಂತೆ ಮತ್ತಿತರ ನೌಕರರ ಕುಂದು ಕೊರತೆಗಳನ್ನು ಕ್ಲಪ್ತ ಸಮಯದಲ್ಲಿ ಬಗೆಹರಿಸಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿ ವರ್ಗದವರ ವೇತನ ಸೇರಿದಂತೆ ಮತ್ತಿತರೆ ಕೆಲಸ ಕಾರ್ಯಗಳನ್ನು ವಿಳಂಬವಿಲ್ಲದೇ ಮಾಡಿಕೊಟ್ಟು ಕಚೇರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದರೆ ಕಚೇರಿಯ ದೈನಂದಿನ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಲಲಿತವಾಗಿ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು…
-
ಆಶ್ರಮದಲ್ಲಿ ಬೆಳೆದ ಹೆಣ್ಣಿಗೆ ಆಸರೆಯಾದ ಜಿಲ್ಲಾಡಳಿತ: ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ವಿಧಿ ಪೂರೈಸಿದ ಶಾಸಕ
ಉಡುಪಿ: ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಗಳು ಜನಪರವಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯಗಳನ್ನು ಕೈಗೊಂಡಾಗ ಜನರ ಮೆಚ್ಚುಗೆಗೆ ಸಹಜವಾಗಿಯೇ ಪಾತ್ರರಾಗುತ್ತಾರೆ. ಜಿಲ್ಲೆಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವು ಇಂತಹದ್ದೇ ಒಂದು ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ಬೆಳೆದ ಅನಾಥ ಹುಡುಗಿ ಜಯಶ್ರೀ (ವಿಜಯಶ್ರೀ)ಎಂಬವರನ್ನು ಮಲ್ಲೇಶ ಡಿ.ಎಲ್. ಎಂಬವರೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿದ್ದು, ಅನಾಥ ಹೆಣ್ಣುಮಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಆಸರೆಯಾಗಿದ್ದಾರೆ. ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ…
-
ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಅಕ್ರಮ: ಜಿಲ್ಲಾಧಿಕಾರಿಗೆ ದೂರು ನೀಡಿದ ಉದ್ಯೋಗಿಗಳು
ಪಡುಬಿದ್ರಿ: ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್‌ನ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದ್ದು, ಬೋಟಿಂಗ್‌ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ…