ಅ. 28 ರಂದು ಗ್ರಾಮ ಪಂಚಾಯತ್ ಉಪಚುನಾವಣೆ: ವೇಳಾಪಟ್ಟಿ ಪ್ರಕಟಣೆ

ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್‌ನ ಪಿಲಾರು ಕ್ಷೇತ್ರದಲ್ಲಿ ಖಾಲಿ ಇರುವ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 4 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಅಕ್ಟೋಬರ್ 13 ರಂದು […]

ಹಿರಿಯರ ಅನುಭವಪೂರಿತ ಮಾರ್ಗದರ್ಶನದಿಂದ ಜಿಲ್ಲೆಯ ಅಭಿವೃದ್ದಿಯ ಸಂಕಲ್ಪ: ಶಾಸಕ ರಘುಪತಿ ಭಟ್

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರೀಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಸಲಹೆ, ಅನುಭವಪೂರಿತ ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ […]

ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಭೂಪಟದಲ್ಲಿಡಲು ಬ್ಲಾಗರ್ಸ್ ಮೀಟ್ ಆಯೋಜಿಸಿದ ಜಿಲ್ಲಾಡಳಿತ

ಉಡುಪಿ: ಜಿಲ್ಲೆಯು ಪ್ರವಾಸಿ ತಾಣಗಳಿಗೆ ಪ್ರಸಿದ್ದಿ ಹೊಂದಿದ್ದು, ಇಲ್ಲಿನ ಬೀಚ್ ಮತ್ತು ದೇವಾಲಯಗಳಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇಲ್ಲಿನ ಎಲ್ಲಾ ಪ್ರವಾಸಿ ತಾಣಗಳ ಬಗ್ಗೆ ಜನರಿಗೆ ತಿಳಿಸಲು ಈ ಬಾರಿಯ ಪ್ರವಾಸೋದ್ಯಮ ದಿನಾಚಾರಣೆ ಸಂದರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಬ್ಲಾಗರ್ಸ್ ಮೀಟ್ ಆಯೋಜಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ನೀಡುವಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಇದೇ […]

ವಾರದೊಳಗೆ ಅಪಘಾತ ಪ್ರಕರಣಗಳ ಶಾಶ್ವತ ಪರಿಹಾರ ಕಾರ್ಯಗಳ ವರದಿ ಒಪ್ಪಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ರಾಷ್ಟೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ತಾತ್ಕಾಲಿಕ ಸುರಕ್ಷತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವಂತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಹೆಚ್ಚಿನ ಒತ್ತು ನೀಡಿ ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅಧಿಕಾರಿಗಳಿಗೆ […]

ಮಳೆಹಾನಿ ಅಧ್ಯಯನ: ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಭೇಟಿ

ಉಡುಪಿ: ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಅವರುಗಳನ್ನು ಪ್ರೋತ್ಸಾಹಿಸಬೇಕು. ಇದರಿಂದ ವೈಯಕ್ತಿಕ ನಷ್ಟದ ಪ್ರಮಾಣವು ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಹೇಳಿದರು. ಅವರು ಗುರುವಾರ ಜಿಲ್ಲೆಯಲ್ಲಿ ಮಳೆಹಾನಿ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿ ಮಾತನಾಡಿದರು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಮತ್ತಿತರ ಬೆಳೆ ವಿಮೆಗೆ ಸರ್ಕಾರವು ಪ್ರೀಮಿಯಂ ಹಣವನ್ನು […]