ಗಣೇಶ ಚತುರ್ಥಿ ಆಚರಣೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಾಭಾವಿ ಸಭೆ

ಉಡುಪಿ: ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾ ರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ […]
ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜದ ಗೌರವ ಕಾಪಾಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಹರ್ ಘರ್ ತಿರಂಗಾ ಕಾರ್ಯಕ್ರಮವು ಕೇಂದ್ರ ಸರ್ಕಾರದ ರಾಷ್ಟ್ರಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಆಗಸ್ಟ್ 13 ರಿಂದ 15 ರವರೆಗೆ ಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ಮನೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯಲು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೋರಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಆಗಸ್ಟ್ 13 ರ ಬೆಳಗ್ಗೆ ಧ್ವಜಾರೋಹಣ ನಡೆಸಿ, ಆ.15 ರ ಸಂಜೆ ಧ್ವಜ ಅವರೋಹಣ ಮಾಡಿ, ನಂತರ ಧ್ವಜವನ್ನು ಸುರಕ್ಷಿತವಾಗಿ ತಮ್ಮ ಮನೆಗಳಲ್ಲಿಯೇ […]
ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ: ಆಗಸ್ಟ್ 10 ರಂದು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಮಾತ್ರೆ ವಿತರಣೆ

ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್‌ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಅಂಗನವಾಡಿ, ರೆಸಿಡೆನ್ಶಿಯಲ್ ಸ್ಕೂಲ್, ಐ.ಟಿ.ಐ ನರ್ಸಿಂಗ್ ಕಾಲೇಜು, ಪ್ರಥಮ ವರ್ಷದ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಆಯಾ ಶಾಲಾ- ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಹಾಗೂ ಶಾಲೆಯಿಂದ ಹೊರಗುಳಿದ 19 ವರ್ಷದೊಳಗಿನ ಮಕ್ಕಳಿಗೆ […]
ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಅದ್ದೂರಿ ಸ್ವಾಗತ: ಜಿಲ್ಲಾಡಳಿತದಿಂದ ಸನ್ಮಾನ ಕಾರ್ಯಕ್ರಮ

ಉಡುಪಿ: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಇಂದು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಜಿಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ […]
ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ನಿಷೇಧ: ಜಿಲ್ಲಾಧಿಕಾರಿಗಳಿಂದ ದೂರುಗಳ ವಿಚಾರಣೆ

ಉಡುಪಿ: ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.