ವರುಣನ ಅಬ್ಬರಕ್ಕೆ ತತ್ತರಿಸಿದ ದಕ್ಷಿಣ ಕನ್ನಡ ಜಿಲ್ಲೆ; ಮನೆ ಮಠ ಕಳೆದುಕೊಂಡು ಅಸ್ತವ್ಯಸ್ತವಾಯಿತು ಜನಜೀವನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆ ಫಟ್ಟ ಪ್ರದೇಶದ ತಪ್ಪಲಿನಲ್ಲಿರುವ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಬಾಳುಗೋಡು, ಹರಿಹರಪಳ್ಳತ್ತಡ್ಕ ಮೊದಲಾದ ಭಾಗದಲ್ಲಿ ಹಲವು ಅನಾಹುತಗಳಿಗೆ ಕಾರಣವಾಗಿದೆ. ಕಲ್ಮಕಾರು, ಕಡಮಕಲ್ಲು ಮೊದಲಾದ ಬೆಟ್ಟಗಳಲ್ಲಿ ಉಂಟಾದ ‌ ಮೇಘಸ್ಪೋಟದಿಂದಾಗಿ ಈ ಭಾಗದ ಹೆಚ್ಚಿನ ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಇಬ್ಬರು ಮಕ್ಕಳು ಮೃತಪಟ್ಟಿದ್ದು, ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಇಲ್ಲಿನ ನಾಗಕ್ಷೇತ್ರ […]

ಸ್ವಯಂ ಪ್ರೇರಣೆಯಿಂದ ಎಪಿಕ್ ಕಾರ್ಡಿಗೆ ಆಧಾರ್ ಜೋಡಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಕರೆ

ಉಡುಪಿ: ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಎಪಿಕ್ ಕಾರ್ಡಿಗೆ ಸ್ವಯಂ ಪ್ರೇರಿತರಾಗಿ ಜೋಡಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು. ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮತದಾರರ ಎಪಿಕ್ ಕಾರ್ಡಿಗೆ ಸ್ವಯಂ ಪ್ರೇರಿತರಾಗಿ ಆಧಾರ್ ಸಂಖ್ಯೆ ಜೋಡಣೆ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಪ್ರಮುಖ ಪಾತ್ರ ವಹಿಸಲಿದ್ದು, ಚುನಾವಣೆಯನ್ನು ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತವಾಗಿ ನಡೆಸಲು […]

ಆಗುಂಬೆ ಘಾಟಿಯಲ್ಲಿ ಲಘು ವಾಹನ ಮತ್ತು ಬಸ್ ಸಂಚಾರಕ್ಕೆ ಅನುವು; ಘನ ವಾಹನಗಳಿಗೆ ಆಗಸ್ಟ್ 31 ರ ವರೆಗೆ ನಿಷೇಧ: ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ. ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ ಭೂಕುಸಿತದಿಂದಾಗಿ ರಸ್ತೆ ಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್ ವಾಲ್ ನ ಮರು ನಿರ್ಮಾಣ ಕಾರ್ಯ ಕೈಗೊಂಡಿದ್ದು ಸದ್ಯ ತಾತ್ಕಾಲಿಕ ದುರಸ್ತಿ ಮುಂದುವರಿದಿದ್ದು, ದುರಸ್ಥಿ ಸಂಪೂರ್ಣವಾಗಿ ಮುಗಿಯಲು ಎರಡು ವಾರಗಳ ಕಾಲಾವಧಿ ಬೇಕಾಗಿರುವುದರಿಂದ ಹಾಗೂ ಪ್ರಸ್ತುತ ಆಗುಂಬೆಯಲ್ಲಿ […]

ಕುದಿ ಗ್ರಾಮದ ಗ್ಯಾಸ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ, ತಕ್ಷಣ ಕಾರ್ಯಾಚರಣೆ, ತಪ್ಪಿದ ಭಾರೀ ಅನಾಹುತ: ಇದು ರಾಸಾಯನಿಕ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ

ಉಡುಪಿ: ಉಡುಪಿ ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದರು, ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು. ಇಂದು ಬೆಳಗ್ಗೆ 8.50 ಕ್ಕೆ ಕುದಿ ಗ್ರಾಮದಲ್ಲಿರುವ ಎ.ಜಿ.ಎಸ್ ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ ಕಂಡು ಬಂದಿದ್ದು, ತಕ್ಷಣವೇ ಅಲ್ಲಿನ ಸಿಬ್ಬಂದಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಉಚಿತ ದೂರವಾಣಿ ಸಂಖ್ಯೆ 1077 ಗೆ ಘಟನೆ […]

75 ನೇ ಸ್ವಾತಂತ್ರೋತ್ಸವ ದಿನಾಚರಣೆ: ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಈ ಬಾರಿಯ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸ್ವಾತ್ರಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ದೇಶದ 75 ನೇ ಸ್ವಾತ್ರಂತ್ರೋತ್ಸವ ಕಾರ್ಯಕ್ರಮವನ್ನು ಈ ಬಾರಿ ವಿಶೇಷವಾಗಿ ಆಚರಣೆ ಮಾಡಲಾಗುವುದು. ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ […]