ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕೌರಂಟೈನ್ ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ
ಉಡುಪಿ ಮೇ 8: ಉಡುಪಿ ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ ತಮ್ಮ ವ್ಯಾಪ್ತಿಯ ಕಟ್ಟಡಗಳು ಮತ್ತು ಹಾಸ್ಟೆಲ್ ಗಳನ್ನು ಜಿಲ್ಲಾಡಳಿತ ಕೋರಿದ ಕೂಡಲೇ ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಧ್ಯಾಯರುಗಳ, ವಸತಿ ಶಾಲೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ […]