ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ನಿರಾಕರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿರುವ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ಮೂಲಕ ಕಳುಹಿಸುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗೆ ಬೆಡ್ ಗಳನ್ನು ನೀಡಲು ನಿರಾಕರಿಸಿದಲ್ಲಿ ಅಂತಹ ಅಸ್ಪತ್ರೆಗಳು ವಿರುದ್ದ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆಗಳು ಸರ್ಕಾರದ ನಿರ್ದೇಶನದಂತೆ ತಮ್ಮಲ್ಲಿನ ಎಲ್ಲಾ ಮಾದರಿಯ ಬೆಡ್ ಗಳಲ್ಲಿ ನಿಗಧಿತ ಸಂಖ್ಯೆ […]