ಜಿಲ್ಲೆಯ ರೈತರು ಬೆಳದ ಹಣ್ಣು ಮತ್ತು ತರಕಾರಿಗಳನ್ನು ಸಾಗಾಟ ಮಾಡಲು  ತೋಟಗಾರಿಕಾ ಇಲಾಖೆಯಿಂದ  ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ  ಏ.1: ಜಿಲ್ಲೆಯ ಅನೇಕ ರೈತರುಗಳು ಮಟ್ಟುಗುಳ್ಳ, ಕಲ್ಲಂಗಡಿ, ಅನಾನಸ್ಸು ಮುಂತಾದ  ಹಣ್ಣು ಮತ್ತು ತರಕಾರಿಗಳನ್ನು ಬೆಳೆದಿದ್ದು, ಬೆಳೆಗಳನ್ನು ಮಾರುಕಟ್ಟೆಗೆ ಕಳುಹಿಸಲು ಸಾದ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ ಜಿಲ್ಲೆಯ ರೈತರು ಬೆಳೆದ ಉತ್ಪನ್ನಗಳನ್ನು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳ ಮಾರುಕಟ್ಟೆಗೆ ಸಾಗಾಟ ಮಾಡಲು ಅನುವಾಗುವಂತೆ 7 ವಾಹನಗಳಿಗೆ ಅನುಮತಿ ಪತ್ರವನ್ನು ಒದಗಿಸಿಕೊಡಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ  25 ಹೆಕ್ಟೇರ್ ಪ್ರದೇಶದಲ್ಲಿ 1000 ಮೆ.ಟನ್ ಕಲ್ಲಂಗಡಿ ಮತ್ತು 150 ಹೆಕ್ಟೇರ್ ಪ್ರದೇಶದಲ್ಲಿ 9732 ಮೆ.ಟನ್  ಅನಾನಸ್ಸು, ಉತ್ಪಾದನೆಯಾಗುವ ಹಾಗೂ ಮಾರುಕಟ್ಟೆಯಾಗದೆ […]