ಕುಂದಾಪುರ: ಡಿ. 17 ರಂದು ಹಾರ್ದಳ್ಳಿ ಮಂಡಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

ಕುಂದಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಡಿಸೆಂಬರ್ 17 ರಂದು ಬೆಳಗ್ಗೆ 11 ಗಂಟೆಗೆ ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಪ್ರೌಢಶಾಲಾ ವಿಭಾಗ) ಗ್ರಾಮ ವಾಸ್ತವ್ಯ ಮಾಡಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಸಲ್ಲಿಸುವಂತೆ ಹಾಗೂ ಗ್ರಾಮಸ್ಥರು ಭಾಗವಹಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸರ್ಕಾರಿ ಇಲಾಖೆಗಳಲ್ಲಿ ಕೃಷಿಕರ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡಿ: ವಿ ಸುನೀಲ್ ಕುಮಾರ್

ಉಡುಪಿ: ದೇಶದ ಬೆನ್ನುಲುಬಾದ ರೈತರು ಇತ್ತೀಚಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಂದ ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರುತ್ತಿಲ್ಲ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಯಾಂತ್ರೀಕರಣ ಹಾಗೂ ಆಧುನಿಕತೆಯನ್ನು ಬೆಳಸಿಕೊಂಡಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಸರ್ಕಾರಿ ಇಲಾಖೆಗಳಲ್ಲಿ ರೈತರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು ಸೋಮವಾರದಂದು ರಜತಾದ್ರಿಯ ಜಿಲ್ಲಾ […]
ಮತದಾರರ ಪಟ್ಟಿ ಪರಿಷ್ಕರಣೆ ಅರ್ಜಿಗಳ ಪರಿಶೀಲನೆ ಸಂಪೂರ್ಣ ಪಾರದರ್ಶಕ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಕುರಿತಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಆನ್‌ಲೈನ್ ಹೊರತುಪಡಿಸಿ ನೇರವಾಗಿ ಅರ್ಜಿ ನೀಡಿರುವವರಿಗೆ ಅರ್ಜಿ ಪಡೆದ ಬಗ್ಗೆ ಸ್ವೀಕೃತಿ ನೀಡಿ ಪಾರದರ್ಶಕತೆ ಕಾಯ್ದುಕೊಂಡು, ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಮತ್ತು ಹೊಸ ಮತದಾರರಿಗೆ ಶೀಘ್ರದಲ್ಲಿ ಎಪಿಕ್ ಕಾರ್ಡ್ ದೊರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, […]
ಕೋಟೇಶ್ವರ ಕೋಟಿಲಿಂಗೇಶ್ವರ ರಥೋತ್ಸವ ನಿಮಿತ್ತ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ

ಕುಂದಾಪುರ: ತಾಲೂಕಿನ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತು ಗೋಪಾಡಿ ಗ್ರಾಮಗಳಲ್ಲಿ ಡಿ. 8 ರ ಬೆಳಗ್ಗೆ 6 ರಿಂದ ಡಿ. 9 ರ ರಾತ್ರಿ 12 ರವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]