ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ: ಸರ್ವಪಕ್ಷ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಉಡುಪಿ: ಸೋಮವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಸರ್ವಪಕ್ಷ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ […]
ಹೆಜಮಾಡಿ ಟೋಲ್ ಶುಲ್ಕ ಜಾರಿಗೊಳಿಸುವ ದಿನಾಂಕವನ್ನು ನಿರ್ಧರಿಸಲಾಗಿಲ್ಲ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪರಿಷ್ಕರಣೆ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯಂತೆ ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಪರಿಷ್ಕೃತ ಟೋಲ್ ಶುಲ್ಕವನ್ನು ಜಾರಿಗೊಳಿಸುವ ದಿನಾಂಕವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಎನ್‌ಎಚ್‌ಎಐ ಮನವಿ ಮೇರೆಗೆ ಹೆಜಮಾಡಿ ಟೋಲ್‌ಗೇಟ್‌ಗೆ ಸೂಕ್ತ ಭದ್ರತೆ ಒದಗಿಸಿದ್ದೇವೆ ಎಂದಿದ್ದಾರೆ. ಟೋಲ್ ಶುಲ್ಕ ಹೆಚ್ಚಳಕ್ಕೆ ಜನಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಶೀಘ್ರದಲ್ಲೇ ಸಭೆ ಕರೆಯಲಾಗುವುದು. ಸಾರ್ವಜನಿಕರಿಂದ ಅಥವಾ […]
ಹೆಚ್.ಐ.ವಿ ರೋಗದ ಶ್ರೀಘ್ರ ತಪಾಸಣೆಯಿಂದ ಚಿಕಿತ್ಸೆ ಸಾಧ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಸಿ, ಶೀಘ್ರದಲ್ಲಿ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಗುರುವಾರ ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ […]
ಅಂಬಾಗಿಲು-ಗುಂಡಿಬೈಲು-ಕಲ್ಸಂಕ ಮಾರ್ಗದಲ್ಲಿ ಬಸ್ ಸಂಚಾರ ಕಡ್ಡಾಯ: ಪ್ರಾದೇಶಿಕ ಸಾರಿಗೆ ಕಚೇರಿ

ಉಡುಪಿ: ಜಿಲ್ಲಾಧಿಕಾರಿಗಳ ಅಧಿಸೂಚನೆಯಂತೆ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ತೆರಳುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ರಾ.ಹೆ. 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ. 66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್-ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಚೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕಕ್ಕೆ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಖಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು […]
ಸರಕಾರಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರಕಾರವು ಸಾರ್ವಜನಿಕರ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹಲವು ಯೋಜನೆಗಳ ಸಮಗ್ರ ಮಾಹಿತಿ ಪಡೆಯಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರದಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗೀತಾ ಮಂದಿರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ […]