ಸಮುದ್ರ ಮಧ್ಯದಿಂದಲೂ ಮೊಳಗಿತು ಕನ್ನಡಾಭಿಮಾನ: ದೋಣಿಯಲ್ಲಿ ನಿಂತು ಕೋಟಿ ಕಂಠ ಗಾಯನ

ಮಲ್ಪೆ: ಈ ಬಾರಿಯ ರಾಜ್ಯೋತ್ಸವ ಸಂದರ್ಭದಲ್ಲಿ ನಾಡು ನುಡಿಯ ಜಾಗೃತಿಗಾಗಿ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಕಚೇರಿ ಕಟ್ಟಡ ಮೈದಾನವೆನ್ನದೆ ಎಲ್ಲೆಲ್ಲೂ ಕನ್ನಡದ ಶಂಖನಾದ ಮೊಳಗಿದೆ. ಈ ಉತ್ಸಾಹ ಕೇವಲ ನೆಲಕ್ಕೆ ಮಾತ್ರ ಸೀಮಿತವಾಗಿರದೆ ಸಾಗರದ ಮಧ್ಯೆಯೂ ಕನ್ನಡದ ಡಿಂಡಿಮವನ್ನು ಬಾರಿಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಕೋ.ಆಪರೇಟಿವ್ ಬ್ಯಾಂಕ್ ಉಡುಪಿ, ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಮಲ್ಪೆಯ ಸಮುದ್ರ ಮದ್ಯದಲ್ಲಿ ಹತ್ತಾರು ದೋಣಿಗಳನ್ನು […]

ಅಕ್ಟೋಬರ್ 28 ರಂದು ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಸಂತೆ-ಜಾತ್ರೆ ನಿಷೇಧ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್‌ನ ಸದಸ್ಯ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಮತದಾನದ ದಿನದಂದು ಈ ಮೇಲ್ಕಂಡ ವ್ಯಾಪ್ತಿಯ ಪ್ರದೇಶಗಳಲ್ಲಿ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ […]

ಜಿಲ್ಲೆಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ

ಉಡುಪಿ:  ಐತಿಹಾಸಿಕ ಕಿತ್ತೂರು ರಾಣಿ ಚೆನ್ನಮ್ಮ      ಉತ್ಸವವನ್ನು ಈ ಬಾರಿ ರಾಜ್ಯಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸಲಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಗುರುವಾರ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿಯ ಜೋಡುಕಟ್ಟೆ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಜ್ಯೋತಿಗೆ ಪೂಜೆ ಸಲ್ಲಿಸಿದರು.

ಪಹಣಿಪತ್ರವಿಲ್ಲದೆ ಪರದಾಡುತ್ತಿರುವ ಹಳ್ಳಿಹೊಳೆ ಕೃಷಿಕರು: ಜಿಲ್ಲಾಧಿಕಾರಿ ಮುಂದೆ ಅಹವಾಲು ತೋಡಿಕೊಂಡ ಗ್ರಾಮಸ್ಥರು

ಉಡುಪಿ: ಹಳ್ಳಿಹೊಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಬೈಂದೂರು ತಾಲೂಕು ವ್ಯಾಪ್ತಿಯ ಅತ್ಯಂತ ಕುಗ್ರಾಮಗಳಲ್ಲಿ ಒಂದಾದ ಹಳ್ಳಿಹೊಳೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಭೂತ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ, ನೆಟ್‌ವರ್ಕ್ ಸಮಸ್ಯೆ, ಕಾಲುಸಂಕದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಸಾರ್ವಜನಿಕರು, […]

ಮಲ್ಪೆ ಕಡಲ ತೀರದಲ್ಲಿ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಭೂ ವಿಜ್ಞಾನ ಇಲಾಖೆ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಹಾಗೂ ಸ್ಧಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತೆ ಹಾಗೂ ಸುರಕ್ಷತೆಯ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನವು ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ನಿಸರ್ಗ ದತ್ತವಾಗಿ ದೊರಕಿರುವ ಸುಂದರವಾದ ಕಡಲ ತೀರಗಳನ್ನು ಸ್ವಚ್ಛ ಹಾಗೂ […]