ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮಣ್ಣಪಳ್ಳದಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಚಿಂತನೆ: ಜಿಲ್ಲಾಧಿಕಾರಿ

ಉಡುಪಿ: ಮಣಿಪಾಲದ ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಲ್ಲಿ ಕ್ರಾಫ್ಟ್ ವಿಲೇಜ್ ಮಾಡುವ ಬಗ್ಗೆ ಚಿಂತನೆ ಮತ್ತು ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ, ಆಹಾರ ಮೇಳ ಮತ್ತು ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ ದೆಹಲಿ ಹಾಟ್ ಮಾದರಿಯಲ್ಲಿ ಕ್ರಾಫ್ಟ್ ವಿಲೇಜ್ ಮಾಡಲು […]

ಗಣೇಶ ಹಬ್ಬದ ಪ್ರಯುಕ್ತ ಸೆಪ್ಟಂಬರ್ 4 ರಂದು ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆ, ಬೈಲೂರು, ಕೌಡೂರು ಹಾಗೂ ನೀರೆ ಗ್ರಾಮ, ಕಾಪು ತಾಲೂಕಿನ ಪುರಸಭಾ ವ್ಯಾಪ್ತಿ, ಕಾಪು ಪಡು, ಮಲ್ಲಾರು, ಮೂಳೂರು, ಉಳಿಯಾರಗೋಳಿ ಹಾಗೂ ಮಜೂರು ಗ್ರಾಮ, ಕುಂದಾಪುರ ತಾಲೂಕು ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ […]