ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಹೆಗಲಿಗೆ: ಜಿಲ್ಲಾಧಿಕಾರಿ ಕೂರ್ಮ ರಾವ್
ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿಪತ್ತು […]
ಪ್ರಾಣಿಗಳ ಅನಧಿಕೃತ ವಧೆ ಮೇಲೆ ಕಣ್ಗಾವಲಿಡಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಣಿಗಳ ಅನಧಿಕೃತ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ […]
ವ್ಯಕ್ತಿಯ ಸರ್ವಾಂಗೀಣ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಉತ್ತಮ: ಯಶ್ಪಾಲ್ ಸುವರ್ಣ
ಉಡುಪಿ: ಯೋಗ ಮನುಷ್ಯನ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಮಾಡಬೇಕೆಂದು ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು. ಅವರು ಬುಧವಾರದಂದು ನಗರದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು […]
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನಿಮಿತ್ತ ದೇವಿ ಸಾನಿಧ್ಯ ಪ್ರತಿಷ್ಠೆ
ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12 ರಂದು ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ […]
ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಉಚಿತ ಸಹಾಯವಾಣಿಯನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ : ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದಂತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ವಿಕೋಪಗಳಿಂದ ತೊಂದರೆಗೊಳಗಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077 ಅಥವಾ 0820-2574802, ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರಗಳನ್ನು 25 ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 […]