ಮತದಾನದ ಹಕ್ಕು ಚಲಾಯಿಸಿದ ರಕ್ಷಿತ್ ಶೆಟ್ಟಿ; ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. “ನಾನು ಚಿಕ್ಕವನಾಗಿದ್ದಾಗ ಉಡುಪಿ ಬೆಳೆಯಬೇಕು ಎಂಬ ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಅಂತ ಅನಿಸುತ್ತೆ. ನಾಯಕನಾದವ […]

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ಪ್ರಚಾರಕರು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ, ನ್ಯಾಯ […]

ಮೇ. 10 ರಂದು ಸಂತೆ ಜಾತ್ರೆ ಉತ್ಸವ ನಿಷೇಧ

ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಸಂಬಂಧ ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಮೇ 10…. ಮತ ಒತ್ತು… ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕರೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10… ಮತ ಒತ್ತು.. ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ರವಿವಾರ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ […]

ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ […]