ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಎಂಸಿಎಂಸಿ ಮೂಲಕ 24*7 ನಿಗಾ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್-ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ […]

ಮತದಾನ ಜಾಗೃತಿಗಾಗಿ ಸ್ವೀಪ್ ನಿಂದ್ ಪ್ರೊಫೈಲ್ ಇಮೇಜ್ ಬಿಡುಗಡೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ಗಳನ್ನು ಸಿದ್ದಪಡಿಸಲಾಗಿದೆ. ಮತದಾನದ ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ […]

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ ವಿಸ್ತರಣೆ

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿಯ ನಿರೀಕ್ಷಿತ ಪ್ರಗತಿಯಲ್ಲಿ ವ್ಯತ್ಯಯವಾಗಿರುವುದರಿಂದ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಇದ್ದ ನಿಷೇಧವನ್ನು 10 ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಹೆದ್ದಾರಿ ಕಾಮಗಾರಿಗಾಗಿ ಎಪ್ರಿಲ್ 05 ರ ವರೆಗೆ ಬಾಳೆಬರೆ ಘಾಟ್‌ ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಇದೀಗ ಕ್ಯೂರಿಂಗ್ ಗೆ ಇನ್ನೂ ಕೆಲವು ದಿನಗಳ ಕಾಲಾವಕಾಶ ಅಗತ್ಯವಾಗಿರುವುದರಿಂದ ವಾಹನ ಸಂಚಾರದ ನಿಷೇಧವನ್ನು […]

ಎಂಸಿಎಂಸಿ ಸಮಿತಿ ಅನುಮತಿ ಇಲ್ಲದೆ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ, ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ […]

ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷ- ಅಭ್ಯರ್ಥಿಗಳ ಬ್ಯಾನರ್ ಅಳವಡಿಕೆ ನಿಷೇಧ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ […]