ಅಸಂಘಟಿತ ಹಾಗೂ ವಲಸೆ ಕಾರ್ಮಿಕರು ಇ-ಶ್ರಮ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ

ಉಡುಪಿ: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬ ಕಾರ್ಮಿಕನೂ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಾದ್ಯಂತ 38 ಕೋಟಿಗೂ ಅಧಿಕ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿದ್ದು ಜಿಲ್ಲೆಯಲ್ಲಿ ಇವರ ಸಂಖ್ಯೆ 3 ಲಕ್ಷಕ್ಕೂ […]

ಪ್ರವಾಸಿ ತಾಣಗಳಲ್ಲಿ ಮಾಹಿತಿ ನೀಡುವ ಕ್ಯೂ.ಆರ್ ಕೋಡ್ ಅಳವಡಿಕೆ

ಉಡುಪಿ: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಭಾನುವಾರ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕರಾವಳಿ ವಿಕಿಮೀಡಿಯಾ ಮತ್ತು ವಿಕಿ ಇ-ಲರ್ನಿಂಗ್ ಕೋರ್ಸ್ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಇಲಾಖೆಯ ಕ್ಯೂ ಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ರಮವನ್ನುದ್ಘಾಟಿಸಿ […]

ಮಣಿಪಾಲ- ಪೆರಂಪಳ್ಳಿ- ಶೀಂಬ್ರ ರಸ್ತೆಗೆ ಜಾಗದ ಸಮಸ್ಯೆ: ಶಾಸಕ ರಘುಪತಿ ಭಟ್ ರಿಂದ ಸ್ಥಳೀಯರ ಮನವೊಲಿಕೆ

ಉಡುಪಿ: ಇಲ್ಲಿನ ಮಣಿಪಾಲ – ಪೆರಂಪಳ್ಳಿ – ಶೀಂಬ್ರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ರೂ. 7.00 ಕೋಟಿ ಅನುದಾನ ಮಂಜೂರಾಗಿ ಭಾಗಶಃ ಕಾಮಗಾರಿ ಪೂರ್ಣಗೊಂಡಿರುತ್ತದೆ. ಈ ರಸ್ತೆ ಹಾದುಹೋಗುವ ಪೆರಂಪಳ್ಳಿಯ ಶೀಂಬ್ರ ಬ್ರಿಡ್ಜ್ ಬಳಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ಸಮಸ್ಯೆ ಉಂಟಾಗಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಸ್ಥಳೀಯರ ಮನವಿಯಂತೆ ಶಾಸಕರು ಶನಿವಾರದಂದು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ. ಹಾಗೂ […]

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ವೆಬ್‌ಸೈಟ್‌ನಲ್ಲಿ […]

ಕರಾವಳಿಯುದ್ದಕ್ಕೂ ಸಾಗಲಿದೆ ಜಿಲ್ಲೆಯ ಪ್ರಗತಿ-ಸಂಸ್ಕೃತಿಯನ್ನು ಬಿಂಬಿಸುವ ರಜತರಥ: ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಕಡೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದು ಶಾಸಕ […]