ಸಕಾಲ ಅರ್ಜಿ ವಿಲೇವಾರಿ ವಿಳಂಬವಾದಲ್ಲಿ ಕ್ರಮ: ಜಿಲ್ಲಾಧಿಕಾರಿ

ಉಡುಪಿ: ರಾಜ್ಯದಲ್ಲೇ ಮಾದರಿ ಜಿಲ್ಲೆ ಎನಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್  ತಿಳಿಸಿದರು. ಅವರು ಬುಧವಾರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಕಾಲ ಪ್ರಗತಿ ಪರಿಶೀಲನಾ ಸಭೆ ಮತ್ತು ಆನ್‍ಲೈನ್‍ನಲ್ಲಿ ಸಕಾಲ ಸ್ವಯಂಚಾಲಿತ ಕಾರಣ ಕೇಳುವ ಪ್ರಕ್ರಿಯೆಯ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಕಾಲ […]