ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ನೇಮಕಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಹಾಗೂ ಇತರ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಸಲಹೆ ನೀಡಲು, ವಿವಿಧ ನ್ಯಾಯಾಲಯ ಪ್ರಕರಣಗಳಿಗೆ ಕಂಡಿಕೆವಾರು ಉತ್ತರಗಳನ್ನು ಸಿದ್ಧಪಡಿಸಲು ಕಾನೂನು ಸಲಹೆಗಾರರ ನೇಮಕ ಮಾಡಲು, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ನಿವೃತ್ತ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಉಪ ತಹಶೀಲ್ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಬಯೋಡಾಟಾಗಳೊಂದಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ಮೇ 29 ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ […]

ಏ. 11 ರಂದು ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಯುಕ್ತ ಕೌಶಲ್ಯ ತರಬೇತಿ ಕೇಂದ್ರ, ಪ್ರಕಾಶ್ ರಿಟೇಲ್, ಎಸ್.ಬಿ.ಐ ಲೈಫ್ ಇನ್ಶೂರೆನ್ಸ್, ಏಂಜೆಲ್ ಬ್ರೋಕಿಂಗ್ ಪ್ರೈಲಿ. ಮತ್ತು ಮೆಡ್ ಪ್ಲಸ್ ಕಂಪನಿಗಳ ವತಿಯಿಂದ ಏಪ್ರಿಲ್ 11 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ […]

ಮತದಾನ ಜಾಗೃತಿಗಾಗಿ ಸ್ವೀಪ್ ನಿಂದ್ ಪ್ರೊಫೈಲ್ ಇಮೇಜ್ ಬಿಡುಗಡೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ಗಳನ್ನು ಸಿದ್ದಪಡಿಸಲಾಗಿದೆ. ಮತದಾನದ ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ […]