ಉಡುಪಿ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಇ- ಆಫೀಸ್ ಸೇವೆ ಶೇ.100 ಅನುಷ್ಠಾನ

ಉಡುಪಿ: ಕಂದಾಯ ಇಲಾಖೆಯು ಸರಕಾರದ ಒಂದು ಪ್ರಮುಖ ಇಲಾಖೆಯಾಗಿದ್ದು, ಮಾತೃ ಇಲಾಖೆ ಎಂದು ಗುರುತಿಸಿಕೊಳ್ಳುತ್ತದೆ. ಮುಖ್ಯಮಂತ್ರಿಗಳ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಸಾರ್ವಜನಿಕರು ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆಯದಂತೆ ನೋಡಿಕೊಳ್ಳಲು ಕಂದಾಯ ಇಲಾಖೆಯಲ್ಲಿ ಹೊಸ ತಂತ್ರಜ್ಞಾನದ ಬಳಕೆ, ನಿಗದಿತ ಕಾಲ ಮಿತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಮುಂದಾಗಿದೆ. ಉತ್ತಮ ಸೇವೆ ನೀಡುವುದರ ಮೂಲಕ ಕಳೆದ ಆರು ತಿಂಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಂದಾಯ ಇಲಾಖೆಯ ಮೂಲಕ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು, ಅಭಿವೃದ್ಧಿಯನ್ನು ಆದ್ಯತೆಯನ್ನಾಗಿಸಿ, ಸರ್ಕಾರ […]