ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿತ ದೂರು ನೀಡಲು ಅವಕಾಶ
ಉಡುಪಿ: ಮೇ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬಂಧಿ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ , ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು […]
ಫೆ. 9 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಫೆಬ್ರವರಿ 9 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ […]
ಕೊಂಕಣ ರೈಲ್ವೆಯಲ್ಲಿ ಕಳ್ಳತನ: ಗಂಭೀರ ಪರಿಗಣನೆಗೆ ಕೇಂದ್ರ ಸಚಿವೆ ಸೂಚನೆ
ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ […]
ಕರಾವಳಿಯುದ್ದಕ್ಕೂ ಸಾಗಲಿದೆ ಜಿಲ್ಲೆಯ ಪ್ರಗತಿ-ಸಂಸ್ಕೃತಿಯನ್ನು ಬಿಂಬಿಸುವ ರಜತರಥ: ರಘುಪತಿ ಭಟ್
ಉಡುಪಿ: ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಕಡೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದು ಶಾಸಕ […]
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಾ ಪರಿನಿರ್ವಾಣ ದಿನ ಆಚರಣೆ
ಉಡುಪಿ: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮಗೆ ಮಂಗಳವಾರ ಮಾಲಾರ್ಪಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಇಲಾಖೆಗಳ […]