ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಟೀಚರ್ಸ್ ಟ್ರೈನಿಂಗ್ ಪ್ರವೇಶಾತಿ ಪಡೆಯಲು ಅ.20 ಕೊನೆಯ ದಿನ

ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲದಲ್ಲಿ ಮಹಿಳೆಯರಿಗೆ ಮಾಂಟೆಸ್ಸರಿ/ನರ್ಸರಿ ಟೀಚರ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾತಿ (2022-23) ಪ್ರಕ್ರಿಯೆ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಗೆ ಪ್ರವೇಶ ಪಡೆದುಕೊಳ್ಳಬಹುದು. ಕೇವಲ ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತಿಯಿರುವವರು, ಹೆಚ್ಚಿನ ಮಾಹಿತಿಗಾಗಿ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಡಿ.ಸಿ ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್ ಕಾಂಪ್ಲೆಕ್ಸ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಜಿಲ್ಲೆಯ ವಿದ್ಯಾರ್ಥಿಗಳು ಶ್ರೇಷ್ಠ ವಿಜ್ಞಾನಿಗಳಾಗಲಿ: ಲಾಲಾಜಿ ಮೆಂಡನ್

ಉಡುಪಿ: ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆದು ಶ್ರೇಷ್ಠ ವಿಜ್ಞಾನಿಗಳು ಮೂಡಿಬರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಅವರು ಅಲೆವೂರಿನ ಪ್ರಗತಿ ನಗರದಲ್ಲಿ, ಜಿಲ್ಲಾಡಳಿತ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್), ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ […]

ಅಕ್ಟೋಬರ್ 2 ರಂದು ಗಾಂಧಿ ಭವನ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ

ಉಡುಪಿ: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಗಾಂಧಿ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಭುಜಂಗಪಾರ್ಕ್ ಹತ್ತಿರ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಆದ್ಯತೆಯ ಮೇರೆಗೆ ಎಂಡೋ ಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಬಗೆಹರಿಸಿ: ಸಚಿವ ಅಂಗಾರ

ಉಡುಪಿ: ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, […]

ಉಡುಪಿ ಜಿಲ್ಲಾ ರಜತ ಮಹೋತ್ಸವ: ಸಾರ್ವಜನಿಕರಿಂದ ಲಾಂಛನ ವಿನ್ಯಾಸ ಆಹ್ವಾನ

ಉಡುಪಿ: ಜಿಲ್ಲೆ ಆರಂಭಗೊಂಡು 25 ವಸಂತಗಳು ಸಂದ ಹಿನ್ನಲೆಯಲ್ಲಿ, ಆಗಸ್ಟ್‌ 25 ರಿಂದ ವಿವಿಧ ಹಂತಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಜತ ಮಹೋತ್ಸವ ಕಾರ್ಯಕ್ರಮವು ನಡೆಯಲಿದ್ದು, ರಜತ ಮಹೋತ್ಸವ ಕಾರ್ಯಕ್ರಮದ ಅಂದವಾದ ಲಾಂಛನವನ್ನು, ಟ್ಯಾಗ್ಲೈನ್‌ ನೊಂದಿಗೆ ರಚಿಸಿ, ಜಿಲ್ಲಾಡಳಿತಕ್ಕೆ ನೀಡಲು ಸಾರ್ವಜನಿಕರಿಂದ ಲಾಂಛನ ವಿನ್ಯಾಸಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕರು ರಚಿಸಿದ ಅತ್ಯುತ್ತಮ ಲಾಂಛನಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲಾಗುವುದು, ಆಯ್ಕೆಯಾದ ಲಾಂಛನಕ್ಕೆ ರೂ.10000 (ರೂಪಾಯಿ ಹತ್ತು ಸಾವಿರಗಳು) ಗಳ ಬಹುಮಾನ ನೀಡಲಾಗುವುದು. ಲಾಂಛನವನ್ನು ಜಿಲ್ಲಾಧಿಕಾರಿ ಕಛೇರಿಯ ಈಮೇಲ್‌ ವಿಳಾಸ […]