ಮಣಿಪಾಲ: ಜುಲೈ 13 ರಂದು ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ

ಮಣಿಪಾಲ: ಬಜಾಜ್ ಅಲಿಯಾನ್ಸ್ ಇನ್ಸೂರೆನ್ಸ್ ಪ್ರೈ.ಲಿ, ಇಂಪುಲ್ಸ್ ಕಂಪನಿ ಪ್ರೈ.ಲಿ, ಬಜ್‌ವರ್ಕ್ಸ್ ಅಡ್ವಾನ್ಸಿಂಗ್ ಹ್ಯೂಮನ್ ಕ್ಯಾಪಿಟಲ್ ಪ್ರೈ.ಲಿ, ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ..ಲಿ ಮತ್ತು ಅಮೆಜಾನ್ ಕಂಪನಿಗಳ ವತಿಯಿಂದ ಜುಲೈ 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರ ವರೆಗೆ ನಗರದ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, […]

ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]

ವಿಶ್ವ ಬೈಸಿಕಲ್ ದಿನಾಚರಣೆ : ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ಬೈಸಿಕಲ್ ಜಾಥಾ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು. ಜಾಥಾದಲ್ಲಿ ಡಿ.ಎಫ್.ಓ ಆಶಿಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಭಾಗವಹಿಸಿದ್ದರು. ಜಿಲ್ಲಾ ಯುವ ಸಮನ್ವಯಾಧಿಕಾರಿ […]

ಮೇ 23: ಉದ್ಯೋಗಾಕಾಂಕ್ಷಿಗಳಿಗೆ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನೇರ ಸಂದರ್ಶನಾವಕಾಶ

ಉಡುಪಿ: ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆಸ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮೈಲ್ ಕಂಪನಿ ವತಿಯಿಂದ ಮೇ 23 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಎಮ್.ಎಸ್ಸಿ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ […]

ಮಹನೀಯರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಅಪರ ಜಿಲ್ಲಾಧಿಕಾರಿ

ಉಡುಪಿ: ಸಾಧಕರು, ದಾರ್ಶನಿಕರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಭಗೀರಥ ಮಹರ್ಷಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹೇಮರೆಡ್ಡಿ ಮಲ್ಲಮ್ಮ ಅಚಲವಾದ ವಿಶ್ವಾಸ, ತಾಳ್ಮೆಯಿಂದ ತಮ್ಮ ಕುಟುಂಬದವರ ಮನಸ್ಸನ್ನು ಗೆಲ್ಲುವುದರ ಜೊತೆಗೆ ಅವರ ಮನ ಪರಿವರ್ತನೆ ಮಾಡುವುದರೊಂದಿಗೆ ಸಮಾಜದಲ್ಲಿ […]