ದ.ಕ ನೂತನ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮೈಸೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ್ರಭಾರಿ ಜಿಲಾಧಿಕಾರಿಯಾಗಿ ನೇಮಕಗೊಂಡಿದ್ದ ಡಾ.ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು. ರವಿಕುಮಾರ್ 2012 ರ ಬ್ಯಾಚ್‌ನ ಕರ್ನಾಟಕ ಕೇಡರ್ ನ ಐಎಎಸ್ ಮತ್ತು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದಾರೆ.