ರಾ.ಹೆದ್ದಾರಿ ಕಾಮಗಾರಿಗಳಿಗೆ ವೇಗ ನೀಡಿ ಶೀಘ್ರ ಪೂರ್ತಿಗೊಳಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು
ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಸಂತೆಕಟ್ಟೆಯ ಕಾಮಗಾರಿ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 66 ರ ಸಂತೆಕಟ್ಟೆ ಅಂಡರ್‌ಪಾಸ್ […]
ಮಾ. 28 ರಿಂದ ಏ.8: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ (Loksabha Elections) ಸಂಬಂಧಿಸಿದಂತೆ ಉಡುಪಿ ಲೋಕಸಭಾ ಚುನಾವಣೆಗೆ ಮಾರ್ಚ್ 28 ರಿಂದ ಏಪ್ರಿಲ್ 4 ರ ವರೆಗೆ ನಾಮಪತ್ರ ಸಲ್ಲಿಕೆ, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಸದರಿ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವುದರಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ನಾಮಪತ್ರಗಳನ್ನು ಹಿಂಪಡೆಯುವ ಕಾರ್ಯಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ […]
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಜ್ಜು: ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ತಾಕೀತು
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ […]